ಬಾಗಲಕೋಟೆ: ಕರೊನಾ ವಾರಿಯರ್ಸ್ ಗೆ ನೈತಿಕವಾಗಿ ಬೆಂಬಲ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದ್ದು, ಆಶಾ, ಅಂಗನವಾಡಿ ಸೇರಿದಂತೆ ವಿವಿಧ ಇಲಾಖೆಯ ಕಾರ್ಯಕರ್ತೆಯರಿಗೆ ಸೀರೆಗಳನ್ನು ಗಿಫ್ಟ್ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಜವಳಿ ಸಚಿವ ಶ್ರೀಮಂತ ಪಾಟೀಲ ಹೇಳಿದ್ದಾರೆ.

ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಮಾಹಿತಿ ನೀಡಿ, ಇದೇ ವೇಳೆ ಅವರು ಈ ಸಮಯದಲ್ಲಿ ನೇಕಾರರ ಬದುಕು ಕೂಡ ಕಶ್ಟದಲ್ಲಿ ಸಿಲುಕಿ ಹಾಕಿಕೊಂಡಿದ್ದು, ಈ ನಿಟ್ಟಿನಲ್ಲಿ ಅವರನ್ನು ಕೈಹಿಡಿಯಲು ರಾಜ್ಯ ಸರ್ಕಾರ ಮುಂದಾಗಿದ್ದು, ಹೀಗಾಗಿ ನೇಕಾರರಿಂದ ಸೀರಿಗಳನ್ನು ಖರೀದಿ ಮಾಡಿ ಆ ಸೀರೆಗಳನ್ನು ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ಮಹಿಳೆಯರಿಗೆ ಗಿಫ್ಟ್ ನೀಡಲಿದ್ದೇವೆ ಎಂದು ಹೇಳಿದ್ದಾರೆ.