ಮೈಸೂರು: ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಕರ್ತವ್ಯ ನಿರತ ಅರಣ್ಯ ವೀಕ್ಷಕರೊಬ್ಬರು ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ. ಅರಣ್ಯ ವೀಕ್ಷಕನ ಸಾವಿನ ಹೀಗ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಈ ಪ್ರಕರಣಕ್ಕೆ ಸಂಬAಧಿಸಿದಾಗೆ ಸರಗೂರು ಠಾಣೆ ಪೋಲೀಸರು ತನಿಖೆ ಕೈಗರತ್ತಿಗೊಂಡಿದ್ದಾರೆ.
ಮೃತರನ್ನು ಸರಗೂರು ತಾಲೂಕಿನ ನೆಟ್ಕಾಲ್ಹುಂಡಿ ಗ್ರಾಮದ ರವಿ (27 ) ಎಂದು ಗುರುತಿಸಲಾಗಿದೆ. ಇವರಿಗೆ ಪತ್ನಿ, ಮೂವರು ಮಕ್ಕಳಿದ್ದಾರೆ. ಅರಣ್ಯದೊಳಗೆ ಸೋಮವಾರ ರಾತ್ರಿ ಸೇವೆ ಸಲ್ಲಿಸುತ್ತಿದ್ದ ತನ್ನ ಪತಿ ಕಾಡಾನೆ ತುಳಿತಕ್ಕೆ ಬಲಿಯಾಗಿದ್ದಾರೆಂದು ರವಿ ಪತ್ನಿ ಅಂಬಿಕಾ ಸರಗೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆದರೆ, ಅರಣ್ಯ ಇಲಾಖೆ ಅಧಿಕಾರಿಗಳು ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎಂದು ಹೇಳುತ್ತಿದ್ದಾರೆ.
ಕಳೆದ ೮ ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ರವಿ ಮೊಳೆಯೂರು ವಲಯ ಅರಣ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ ಪಾಳಿಯ ಕೆಲಸವಿದ್ದ ಕಾರಣ ಸೋಮವಾರ ಸಂಜೆ ೫ ಗಂಟೆಗೆ ನೆಟ್ಕಾಲ್ಹುಂಡಿ ಗ್ರಾಮದ ಮನೆಯಿಂದ ಹೊರಟಿದ್ದರು.
ರಾತ್ರಿ 8:30ರ ವೇಳೆ ಪತ್ನಿಗೆ ಕರೆ ಮಾಡಿ ಯೋಗಕ್ಷೇಮ ವಿಚಾರಿಸಿ, ಮಧ್ಯರಾತ್ರಿ ೧೨ರ ವೇಳೆಗೆ ರವಿ ತನ್ನ ಭಾವನಿಗೂ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಆದರೆ, ಅರಣ್ಯಾಧಿಕಾರಿಗಳ ಪ್ರಕಾರ ರವಿಯ ಮೇಲೆ ಕಾಡಾನೆ ದಾಳಿ ನಡೆಸಿರುವ ಯಾವುದೇ ಕುರುಹು ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ.
ಅರಣ್ಯಾಧಿಕಾರಿಗಳು ಪತಿಯ ಸಾವನ್ನು ಹೃದಯಾಘಾತವೆಂದು ಸುಳ್ಳು ಹೇಳುತ್ತಿದ್ದಾರೆ. ರವಿ ಅವರು ಆರೋಗ್ಯವಾಗಿದ್ದರು. ಮಂಗಳವಾರ ಮುಂಜಾನೆ ಕಾಡಾನೆ ದಾಳಿ ನಡೆಸಿ ತನ್ನ ಪತಿಯನ್ನು ಕೊಂದಿದೆ ಎಂದು ಪತ್ನಿ ಅಂಬಿಕಾ ಹೇಳುತ್ತಿದ್ದಾರೆ.
ಎಚ್.ಡಿ.ಕೋಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಲಾಗಿದೆ. ಈ ಕುರಿತು ಸರಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೋಲೀಸರು ತನಿಖೆ ನಡೆಸುತಿದ್ದಾರೆ.
No comments!
There are no comments yet, but you can be first to comment this article.