ಬೆಂಗಳೂರು: ಕರ್ನಾಟಕ ಆರ್ಯವೈಶ್ಯ ಸಮುದಾಯ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಯಡಿ ಸಾಲಸೌಲಭ್ಯ ಪಡೆಯಲು ಪ್ರಸಕ್ತ ಸಾಲಿಗೆ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನಿಸಲಾಗಿದೆ.

 ಸೌಲಭ್ಯ ಪಡೆಯಲು ಇಚ್ಚಿಸುವವರು ಆನ್‍ಲೈನ್ ಮೂಲಕ ಅಗತ್ಯ ದಾಖಲೆಗಳೊಂದಿಗೆ kacdc.karnataka.gov.in  ಇಲ್ಲಿ ನವೆಂಬರ್ 15ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ. ಅರ್ಜಿಗಳನ್ನು ಆನ್‍ಲೈನ್ ಮುಖಾಂತರ ಮಾತ್ರ ಸ್ವೀಕರಿಸಲಾಗುವುದು.

ನಿಗಮದ ಯೋಜನೆಗಳಿಗೆ ಅವಶ್ಯವಿರುವ ಅರ್ಹತೆಗಳು: ಆರ್ಯವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು. ನಮೂನೆ-ಜಿ  ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು. ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ಅಧಾರ್ ಕಾರ್ಡ್ ಹೊಂದಿರಬೇಕು.

ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು: ಈ ಯೋಜನೆಯಲ್ಲಿ ಸಣ್ಣ ವ್ಯಾಪಾರ, ಸ್ವಯಂ ಉದ್ಯೋಗ ಇತ್ಯಾದಿ ವ್ಯಾಪಾರ ಚಟುವಟಿಕೆಗಳಿಗೆ ಸಾಲ ನೀಡಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.3,00,000/-ಗಳ ಮಿತಿಯ ಒಳಗಿರಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 45 ವರ್ಷ ಒಳಗಿನವರಾಗಿರಬೇಕು.

ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು: ಈ ಯೋಜನೆಯಲ್ಲಿ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಇತ್ಯಾದಿ ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಸಿಇಟಿ, ಎನ್‍ಇಇಟಿ ಮೂಲಕ ಆಯ್ಕೆಯಾಗಿ ಮತ್ತು ವೃತ್ತಿಪರ ಪಿಹೆಚ್.ಡಿ ಕೋರ್ಸ್‍ನಲ್ಲಿ ವ್ಯಾಸಂಗ ಮಾಡುವವರಿಗೆ ಅರಿವು ಶೈಕ್ಷಣಿಕ ಸಾಲ ನೀಡಲಾಗುವುದು.

 ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಪ್ರಾಂಶುಪಾಲರಿಂದ ದೃಢೀಕರಿಸಿದ ಪ್ರಸ್ತುತ ವರ್ಷದ ವ್ಯಾಸಂಗ ಪ್ರಮಾಣ ಪತ್ರ ಮತ್ತು ನಿಗದಿತ ಶುಲ್ಕ ನಮೂನೆ ಪತ್ರ ಹೊಂದಿರಬೇಕು.

  ಮಹಿಳೆಯರಿಗೆ ಶೇ.33 ರಷ್ಟು ಮತ್ತು ವಿಶೇಷ ಚೇತನರಿಗೆ ಶೇ.5 ರಷ್ಟು ಮೀಸಲಾತಿ ಇರುತ್ತದೆ. ಸಂರ್ಕ ವಿವರ ನಿಗಮದ ಸಹಾಯವಾಣಿ 9448451111, ಇ-ಮೇಲ್ support.kacdc@karnataka.gov.in   ಯೋಜನೆಗಳ ಮಾರ್ಗಸೂಚಿಗಳು ಹಾಗೂ ಸಲ್ಲಿಸಬೇಕಾದ ದಾಖಲೆಗಳ ವಿವರಗಳನ್ನು kacdc.karnataka.gov.in  ಇಲ್ಲಿ ತಿಳಿಯಬಹುದಾಗಿದೆ. ಅರ್ಜಿದಾರರ ಮೊಬೈಲ್ ಸಂಖ್ಯೆಯು ಆಧಾರ್‍ಗೆ ಜೋಡಣೆಯಾಗಿರಬೇಕು ಎಂದು ಕರ್ನಾಟಕ ಆರ್ಯ  ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ವಿ.ರಘುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.