ಚಿತ್ರದುರ್ಗ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಲ್ಲಿ ನೋಂದಾಯಿಸಿಕೊಂಡಿರುವ ಜಿಲ್ಲೆಯ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಗಾಗಿ 2020-21ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆ, ಗಿರಿಜನ ಉಪಯೋಜನೆಯಡಿಯಲ್ಲಿ ಕುರಿ, ಮೇಕೆ ಘಟಕ ಸಹಾಯಧನಕ್ಕಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

 ಅರ್ಜಿಗಳನ್ನು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಪಶು ಆಸ್ಪತ್ರೆ ಆವರಣ, ಚಿತ್ರದುರ್ಗ ಇಲ್ಲಿ ಪಡೆದು ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟೆಂಬರ್ 25ರೊಳಗಾಗಿ ಸಲ್ಲಿಸಬಹುದಾಗಿದೆ.

 ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಪಶು ಆಸ್ಪತ್ರೆ ಆವರಣ, ಚಿತ್ರದುರ್ಗ ಇಲ್ಲಿ ಸಂಪರ್ಕಿಸಬಹುದು ಎಂದು ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.