ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗ, ಲೋಕೋಪಯೋಗಿ ಇಲಾಖೆಯಲ್ಲಿನ 523 ಗ್ರೂಪ್ ಸಿ ವೃಂದದ ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಲೋಕೋಪಯೋಗಿ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ತಾಂತ್ರಿಕೇತರ ಹುದ್ದೆಗಳಿಗೆ ಅಭ್ಯರ್ಥಿಗಳು ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆ. 19,2020: ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ ಸೆ. 21,2020: ಅರ್ಜಿ ಶುಲ್ಕ: ಅರ್ಜಿದಾರರು 600 ರೂ. ಪಾವತಿಸಬೇಕು. ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 300 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಸೆ. 18 ರೊಳಗೆ ಪಾವತಿಸಬೇಕು.ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ರ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ ಸೈಟ್ http://www.kpsc.kar.nic.in/indexk.html ಗೆ ಭೇಟಿ ನೀಡಬಹುದು.