ಬೆಂಗಳೂರು: ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 100 ಕೋಟಿ ರೂ. ಅನುದಾನ ಬಿಡುಗಡೆ ಆದೇಶಿಸಿದ್ದಾರೆ. ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಎಂದು ನಾಮಕರಣ ಮಾಡಿದ ಬಳಿಕ ಆ ಭಾಗದ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಮೊದಲ ಕಂತಿನಲ್ಲಿ ಈ ಹಣ ಬಿಡುಗಡೆ ಮಾಡಲಾಗಿದೆ.

600 ಕೋಟಿ ರೂ. ಅನುದಾನವನ್ನು ಒದಗಿಸುವಂತೆ ಮಂಡಳಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಕೋವಿಡ್ ಪರಿಣಾಮ ಅನುದಾನ ಒದಗಿಸುವುದು ಸಮಸ್ಯೆಯಾದ ಹಿನ್ನೆಲೆಯಲ್ಲಿ ಮೊದಲ ಕಂತಿನಲ್ಲಿ ಈ ಹಣ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಕಲ್ಯಾಣ ಕರ್ನಾಟಕ ಕಾರ್ಯಕ್ರಮಕ್ಕೆ ಸಿಎಂ ಯಡಿಯೂರಪ್ಪ ಗುರುವಾರ ಚಾಲನೆ ನೀಡಲಿದ್ದು, ಸಿದ್ಧತೆ ನಡೆಯುತ್ತಿದೆ. ವರ್ಚುವಲ್ ಕಾರ್ಯಕ್ರಮಕ್ಕೆ ಈ ಮೊದಲು ಉದ್ದೇಶಿಸಲಾಗಿತ್ತು. ಈಗ ಕಲಬುರಗಿಯಲ್ಲಿಯೇ ಕಾರ್ಯಕ್ರಮ ಹಮ್ಮಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ.