ಬೆಂಗಳೂರು/ ನವದೆಹಲಿ: ರಾಜ್ಯಪಾಲರು  ಬಿ.ಎಸ್.ಯಡಿಯೂರಪ್ಪ ಪ್ರಮಾಣವಚನಕ್ಕೆ ಗ್ರೀನ್ ಸಿಗ್ನಲ್ ನೀಡುತ್ತಿದ್ದಂತೆ ಇತ್ತ ಕಾಂಗ್ರೆಸ್ ಜೆಡಿಎಸ್ ತಡೆ ನೀಡಿ ಸುಪ್ರೀಂ ಕೋರ್ಟ್ ಗೆ ಮನವಿ ನೀಡಿದರು. ಆದರೆ ಕೋರ್ಟ್   ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ.

ರಾತ್ರಿ 1.45ಕ್ಕೆ ವಾದವನ್ನು ಆಲಿಸಲು ಆರಂಭಿಸಿದ ಸುಪ್ರೀಂನ ತ್ರಿಸದಸ್ಯ ಪೀಠ, ಮೂರುವರೆ ಗಂಟೆಗಳ ಕಾಲ ವಿಚಾರಣೆ ನಡೆಸಿತು. ವಿಚಾರಣೆ ಬಳಿಕ, ಯಡಿಯೂರಪ್ಪ ಪ್ರಮಾಣವಚನಕ್ಕೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಅರ್ಜಿಯ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದೆ. ಅದರೊಳಗೆ ಶಾಸಕರ ಬೆಂಬಲಪತ್ರವನ್ನು ಸಲ್ಲಿಸಬೇಕೆಂದು ಬಿಎಸ್‌ವೈಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಇದರಿಂದ ನಿರಾಳವಾದ  ಯಡಿಯೂರಪ್ಪ ಇಂದು ಬೆಳಿಗ್ಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಆದ್ರೆ ಇದನ್ನು ಖಂಡಿಸಿ ಕಾಂಗ್ರೆಸ್- ಜೆಡಿಎಸ ಶಾಸಕರು ಪ್ರತಿಭಟನೆಗೆ ಮುಂದಾಗಿದ್ದಾರೆ.