ಮಂಗಳೂರು: ಕಾಂಗ್ರೆಸ್ ಪ್ರಣಾಳಿಕೆ ಅಲ್ಲ. ಬದಲಾಗಿ ರಾಜ್ಯದ ಜನರ ಪ್ರಣಾಳಿಕೆ ಇದು ಎಂದು ರಾಹುಲ್ ಗಾಂಧಿ ಚುನಾವಣೆ ಪ್ರಣಾಳಿಕೆ ಬಿಡುಗಡೆಮಾಡಿ ಹೇಳಿದರು.

ಮಂಗಳೂರಿನಲ್ಲಿ ಮಾತನಾಡುತ್ತಾ, ಬಸವಣ್ಣನ ತತ್ವಗಳನ್ನ ಪ್ರಣಾಳಿಕೆ ಒಳಗೊಂಡಿದೆ. ನುಡಿದಂತೆ ನಡೆ. ಕಳೆದ ಐದು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಏನು ಹೇಳಿತ್ತೋ ಅದನ್ನೇ ಮಾಡಿದೆ ಅಂತ ಹೇಳಿದರು. ಪ್ರಣಾಳಿಕೆಯಲ್ಲಿ ಕೃಷಿಗೆ ಮೊದಲ ಆದ್ಯತೆ, ಆರೋಗ್ಯಕ್ಕೆ ನಮ್ಮ ಮೊದಲ ಆದ್ಯತೆ, ರಾಜ್ಯದ ಅಭಿವೃದ್ಧಿಗೆ ನಮ್ಮ ಮೊದಲ ಆದ್ಯತೆ. ನೀಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಹೇಳಿದ್ದಾರೆ.

ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್, ಕಾಂಗ್ರೆಸ್ ಹಿರಿಯ ನಾಯಕರಾದ ವೀರಪ್ಪ ಮೊಯ್ಲಿ, ಜನಾರ್ದನ್ ಪೂಜಾರಿ ಮತ್ತಿತರರು ಹಾಜರಿದ್ದರು.