ಚಿತ್ರದುರ್ಗ: ಕಾಂಗ್ರೆಸ್ ನಾಯಕರುಗಳ ಮೇಲೆ ಐಟಿ ದಾಳಿ ನಡೆಯುತ್ತಿದೆ. ಇದೊಂದು ದುರುದೇಶದಿಂದ ಕೂಡಿದೆ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್‌ ಹೇಳಿದರು

ಅವರು ಇಂದು ಐಮಂಗಲ ಪೊಲೀಸ್ ತರಬೇತಿ ಶಾಲೆಯಲ್ಲಿ ಭಾಷಣ ಮಾಡಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು. ಕಾಂಗ್ರೆಸ್ ನವರನ್ನ ಉದ್ದೇಶಿಸಿ ನಡೆಸುತ್ತಿರುವ ದಾಳಿಗಳನ್ನು ನೋಡಿದರೆ ಕೇಂದ್ರ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತದೆ ಎನ್ನುವುದನ್ನ ತೋರಿಸುತ್ತದೆ ಎಂದು ಹೇಳಿದರು.

ಪೊಲೀಸ್ ಇಲಾಖೆಯ ಅಧಿಕಾರಿ ಹಾಗೂ ನೌಕರರ ವೇತನ ಪರಿಷ್ಕರಣೆ ಸಂಬಂಧ ರಾಘವೇಂದ್ರ ಔರಾದ್ಕರ್ ನೇತೃತ್ವದ ಸಮಿತಿ ನೀಡಿರುವ ವರದಿಯ ಅಂಶ ಪರಿಗಣಿಸಲಾಗುತ್ತದೆ ಎಂದು ಹೇಳಿದರು. ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಪಿಯುಸಿ ಓದಿದ್ದರೆ ಸಾಕು. ಆದರೆ, ಪದವಿ, ಸ್ನಾತಕೋತ್ತರ ಪದವಿ ಓದಿದವರು ಸಾಕಷ್ಟು‌ ಜನ ಪೇದೆಗಳಾಗಿದ್ದಾರೆ. ಇದರಿಂದ ಪೊಲೀಸ್ ಇಲಾಖೆ ಮತ್ತಷ್ಟು ಕ್ರಿಯಾಶೀಲವಾಗಲಿದೆ ಎಂದು ಹೇಳಿದರು.