ನವದೆಹಲಿ: ಸಿಬ್ಬಂದಿ ನೇಮಕಾತಿ ಆಯೋಗವು ದೆಹಲಿ ಪೊಲೀಸ್ ನಲ್ಲಿ ಖಾಲಿ ಇರುವ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಒಟ್ಟು 5846 ಹುದ್ದೆಗಳು ಖಾಲಿ ಇದ್ದು, ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10+2 ವಿದ್ಯಾರ್ಹತೆಯನ್ನು ಹೊಂದಿರಬೇಕು. ಅರ್ಜಿ ಸಲ್ಲಿಸಲು ಕಡೆ ದಿನಾಂಕ 07-09-2020 ಆಗಿದೆ. ಹೆಚ್ಚಿನ ಮಾಹಿತಿಗೆ ssc.nic.inಗೆ ಸಂಪರ್ಕಿಸಬಹುದು.