ಬೆಂಗಳೂರು: ಆಗಸ್ಟ್ 1 ರಂದು ನಿಗದಿಯಾಗಿದ್ದ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕಾಗಿ ಕಾಮೆಡ್-ಕೆ ಪ್ರವೇಶ ಪರೀಕ್ಷೆಯನ್ನು ಕೊರೋನಾ ಕಾರಣದಿಂದ ಮುಂದೂಡಲಾಗಿದೆ.

ಈ ಮೊದಲು ಮೇ 19, ಜೂನ್ 25ಕ್ಕೆ ನಿಗದಿಯಾಗಿದ್ದ ಪರೀಕ್ಷೆಯನ್ನು ಆಗಸ್ಟ್ 1ರಂದು ನಡೆಸಬೇಕಿತ್ತು. ಅದನ್ನು ಕೂಡ ಮುಂದೂಡಲಾಗಿದ್ದು, ಮಾಹಿತಿಗಾಗಿ www.comedk.org ಸಂಪರ್ಕಿಸಬಹುದು ಎಂದು ಹೇಳಲಾಗಿದೆ.

ಈ ಹಿಂದೆ ಎರಡು ಬಾರಿ ನಿಗದಿಯಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಆಗಸ್ಟ್ 1 ರಂದು ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ, ಆಗಸ್ಟ್ 1 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದ್ದು ಸದ್ಯದಲ್ಲಿಯೇ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗುವುದು.

(ಸಾಂದರ್ಭಿಕ ಚಿತ್ರ)