ಹಿರಿಯೂರು : ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಹಿರಿಯೂರು ತಾಲೂಕಿನ ಆನೆಸಿದ್ರಿ ಗೇಟ್ ಸಮೀಪ ಸಂಭವಿಸಿದೆ.

ಮೃತರನ್ನು ಹಾನಗಲ್ ತಾಲೂಕಿನ ಸೋಮಸಾಗರ ಗ್ರಾಮದ ಬಸವರಾಜಪ್ಪ (43), ಅವರ ಹೆಂಡತಿ ಸರೋಜಮ್ಮ (35) ಹಾಗೂ ಅವರ ಸಂಬಂಧಿ ಕಲವೀರಪ್ಪ ದೊಡ್ಡಮನಿ (43) ಎಂದು ಗುರುತಿಸಲಾಗಿದೆ.

ಇನ್ನು ಅಪಘಾತದಲ್ಲಿ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಸ್ಥಳಕ್ಕೆ ಬಂದು ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.