ನವದೆಹಲಿ; ವಲಸೆ ಕಾರ್ಮಿಕರಿಗೆ ಅನ್ವಯವಾಗುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶವೊಂದನ್ನು ನೀಡಿದೆ.

ಕಾರ್ಮಿಕರು ಅವರವರ ಸ್ವಗ್ರಾಮಗಳನ್ನು ತಲುಪಲು ಎಲ್ಲಾ ರಾಜ್ಯ ಸರ್ಕಾರಗಳೂ ಕೂಡ 15 ದಿನಗಳ ಒಳಗೆ ಕ್ರಮ ಕೈಗೊಳ್ಳಬೇಕು ಮತ್ತು ಅವರು ಯಾವ ರಾಜ್ಯಕ್ಕೆ ಸೇರಿರುತ್ತಾರೋ ಆ ರಾಜ್ಯದಲ್ಲಿಯೇ ಅವರಿಗೆ ಉದ್ಯೋಗ ದೊರಕಿಸಿಕೊಡಬೇಕು ಎಂದು ಆದೇಶಿಸಿದೆ.

ಲಾಕ್ ಡೌನ್ ಹೇರಿದ್ದ ಪರಿಣಾಮ ವಲಸೆ ಕಾರ್ಮಿಕರು, ಕೆಲಸ ಮತ್ತು ಒಂದು ಹೊತ್ತಿನ ಊಟವೂ ಇಲ್ಲದೆ ಪರದಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ತೀರ್ಪು ನೀಡಿದೆ.