ಬೆಳಗಾವಿ: 100ಕ್ಕಿಂತಲೂ ಹೆಚ್ಚು ಕಾರ್ಮಿಕರನ್ನು ಹೊಂದಿರುವ ಕಾರ್ಖಾನೆಗಳು ಸರ್ಕಾರ ಅನುಮತಿ ಇಲ್ಲದೆಯೇ ಮುಚ್ಚುವಂತಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಅನುಮತಿ ಪಡೆಯದೆ ಕಾರ್ಖಾನೆಗಳು ಮುಚ್ಚುವಂತಿಲ್ಲ. ಲಾಕ್’ಡೌನ್ ಸಡಿಲಗೊಳ್ಳುತ್ತಿದ್ದಂತೆಯೇ ಸಾಕಷ್ಟು ಕಾರ್ಖಾನೆಗಳು, ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಿರುವ ಕುರಿತು ದೂರುಗಳು ಬಂದಿವೆ. ಇಂತಹ ಕಾರ್ಖಾನೆಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.