ಬೆಂಗಳೂರು : ಸರ್ಕಾರಿ ಪಿಯು ಕಾಲೇಜುಗಳಲ್ಲಿ ಅಭಿವೃದ್ಧಿ ಶುಲ್ಕದ ಹೆಸರಿನಲ್ಲಿ ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ಪಡೆಯುವಂತಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದ ಕೆಲವೊಂದು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅಭಿವೃದ್ಧಿ ಶುಲ್ಕದ ಹೆಸರಿನಲ್ಲಿ ವಿದ್ಯಾರ್ಥಿಗಳಿಂದ ಹೆಚ್ಚುವರಿಯಾಗಿ ಶುಲ್ಕ ಪಡೆಯುತ್ತಿರುವುದು ಸಚಿವರ ಗಮನಕ್ಕೆ ಬಂದಿದೆ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಿಸಿದ ಕಾಲೇಜುಗಳ ಪ್ರಾಂಶುಪಾಲರನ್ನೇ ನೇರ ಹೊಣೆಗಾರರನ್ನಾಗಿಸಿ ಸೂಕ್ತ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.