ಬೆಂಗಳೂರು : ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಕಾಲೇಜು ಶಿಕ್ಷಣ ಬಹುಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಕಾಲೇಜುಗಳಿಗೆ ರಜೆ ಇದ್ದರೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಹಾಜರಾತಿ ಕಡ್ಡಾಯ ಎಂದು ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಕಾಲೇಜುಗಳಿಗೆ ರಜೆ ಇದ್ದರೂ ಪ್ರಾಧ್ಯಾಪಕರು ಕಾಲೇಜುಗಳಿಗೆ ಕಡ್ಡಾಯವಾಗಿ ಅಗಮಿಸಿ ಪರೀಕ್ಷಾ ಸಿದ್ಧತೆ ಸಹಿತ ಮೊದಲಾದ ಶೈಕ್ಷಣಿಕ ಚಟುವಟಿಕೆಗಳನ್ನು ಕೈಗೊಳ್ಳಬೇಕೆಂದು ಹೇಳಲಾಗಿದೆ. ಜೊತೆಗೆ ಕೆಂಪು ವಲಯದಲ್ಲಿ ಎ ಮತ್ತು ಬಿ ಗುಂಪಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಸಿ ಮತ್ತು ಡಿ ವರ್ಗದ ಶೇ. 33 ರಷ್ಟು ಸಿಬ್ಬಂದಿ ಕೆಲಸಕ್ಕೆ ಹಾಜರಾಗಲು ತಿಳಿಸಲಾಗಿದೆ. ಇನ್ನು ಹಸಿರು ಮತ್ತು ಕಿತ್ತಳೆ ವಲಯದಲ್ಲಿ ಎಲ್ಲಾ ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗುವಂತೆ ಕಾಲೇಜು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.