ಚಿತ್ರದುರ್ಗ : ಪಾಕಿಸ್ತಾನದ ಮೇಲೆ ಪ್ರೀತಿಯಿರುವ ಕುಮಾರಸ್ವಾಮಿ ಭಾರತ ದೇಶ ಬಿಟ್ಟು ತೊಲಗಲಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

 ಏಕೆಂದ್ರೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಈ ಭೂಪಟದಲ್ಲಿ ಪಾಕಿಸ್ತಾನ ಇರುತ್ತಿದ್ದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಿರಲಿಲ್ಲ. ಪಾಕಿಸ್ತಾನ ತೋರಿಸಿಕೊಂಡು ಬಿಜೆಪಿ ವೋಟ್ ಪಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದರು.

ಅದಕ್ಕೆ ಪ್ರತಿಯಾಗಿ ಶ್ರೀರಾಮುಲು, ಭಾರತ ಹಿಂದೂ ರಾಷ್ಟ್ರ, ಇಲ್ಲಿ ಎಲ್ಲರೂ ಸಮಾನರಾಗಿ ಬಾಳಬೇಕು. ದೇಶ ಒಡೆಯುವ ಷಡ್ಯಂತ್ರಕ್ಕಾಗಿ ಇಲ್ಲಸಲ್ಲದ ಮಾತು ಸರಿಯಲ್ಲ. ದೇಶದ ಜನತೆ ಒಂದಾಗುತ್ತಿದ್ದಾರೆ. ವೋಟ್ ಬ್ಯಾಂಕ್ ಹೋಗುತ್ತಿದೆ ಎಂಬ ಕಾರಣಕ್ಕೆ ಹೀಗೆಲ್ಲಾ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರು.