ಹುಬ್ಬಳ್ಳಿ: ಹೆಚ್‌.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಕೆಲಸ ಮಾಡಬೇಕು. ನಿಖಿಲ್  ತಂದೆಯಾಗಿ ಅಲ್ಲ ಎಂದು ಬಿಜೆಪಿ ಸ್ಟಾರ್ ಪ್ರಚಾರಕಿ ಮಾಳವಿಕ ಅವಿನಾಶ್ ಹೇಳಿದ್ದಾರೆ.

ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರನ್ನು ನೈತಿಕವಾಗಿ ಕುಗ್ಗಿಸುವ ಕೆಲಸ ನಡೆಯುತ್ತಿದೆ, ಇದು ಸರಿಯಲ್ಲ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಸ್ಪರ್ಧೆ ಮಾಡುವ ಹಕ್ಕಿದೆ. ಅಭ್ಯರ್ಥಿಗಳ ನಡುವೆ ವೈಯಕ್ತಿಕ ಟೀಕೆಗಳು ಸರಿಯಲ್ಲ. ಎಂದರು.