ಕೊಪ್ಪಳ: ಕುರುಬ ಸಮುದಾಯವನ್ನೂ ಎಸ್ಟಿಗೆ ಒಳಪಡಿಸಲಿ. ನಮ್ಮದೇನೂ ಅಭ್ಯಂತರವಿಲ್ಲ ಎಂದು ವಾಲ್ಮೀಕಿ ಸಮುದಾಯದ ಮಠಾಧೀಶ ಪ್ರಸನ್ನಾನಂದಪುರಿ ಶ್ರೀ ಹೇಳಿದರು.

ಕೊಪ್ಪಳದಲ್ಲಿ ಮಾತನಾಡಿದ ಅವರು ನಾವು ಈ ಹಿಂದೆಯೇ ಬಿಜೆಪಿಗೆ ಬೆಂಬಲ ನೀಡಿದ್ದೆವು. ಮಾಧ್ಯಮಗಳಲ್ಲಿ ನಮ್ಮ ಸಮುದಾಯದ ನಾಯಕರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂಬ ಬಗ್ಗೆಯೂ ಚರ್ಚೆಗಳಾಗಿದ್ದವು. ಆದರೆ ಅದು ಈಗ ಮುಗಿದ ಅಧ್ಯಾಯದಂತೆ ಕಾಣುತ್ತಿದೆ. ಮುಂದಿನ ದಿನಗಳಲ್ಲಿ ನಮ್ಮ ನಾಯಕರನ್ನು ಸಿಎಂ ಮಾಡಬೇಕೆಂದು ಒತ್ತಾಯಿಸುತ್ತೇವೆ ಎಂದು ಹೇಳಿದರು.