ಬೆಂಗಳೂರು : ಮಾರಕ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಏ.14ರವರೆಗೆ ಲಾಕ್ ಡೌನ್ ಘೋಷಿಸಲಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಲಾಕ್ ಡೌನ್ ನಿಂದಾಗಿ ಕೃಷಿ ಸೇರಿದಂತೆ ಇತರೇ ಚಟುವಟಿಕೆಗಳಿಗೆ ಅಡ್ಡಿಯುಂಟಾದ ಕಾರಣ ಕೃಷಿಕ ಸಮುದಾಯ ತೊಂದರೆಗೆ ಸಿಲುಕಿದ್ದಾರೆ, ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ರಾಜ್ಯದಲ್ಲಿ ಕೃಷಿ ಯಂತ್ರೋಪಕರಣಗಳ ಅಂಗಡಿಗಳಿಗೆ ವಿನಾಯಿತಿ ನೀಡಲಾಗಿದೆ.

ಗೃಹ ಸಚಿವಾಲಯದ ಮಾರ್ಗಸೂಚಿ ಪ್ರಕಾರ ರಾಜ್ಯದಲ್ಲಿ ಕೊರೊನಾ ಲಾಕ್‌ಡೌನ್‌ನಿಂದ ಬೀಗ ಹಾಕಿರುವ ಕೃಷಿ ಯಂತ್ರೋಪಕರಣಗಳನ್ನು, ಬಿಡಿಭಾಗಗಳನ್ನು ಮಾರಾಟ ಮಾಡುವ ಅಂಗಡಿಗಳಿಗೆ ವಿನಾಯಿತಿ ನೀಡಲಾಗಿದೆ.

ಕೃಷಿ ಯಂತ್ರೋಪಕರಣಗಳ ಅಂಗಡಿಗಳು , ಅದರ ಬಿಡಿಭಾಗಗಳು ಮತ್ತು ರಿಪೇರಿ ಮಾಡುವವರು ತಕ್ಷಣದಿಂದ ಗೃಹ ಸಚಿವಾಲಯ ಹೊರಡಿಸಿದ ಆದೇಶದ ಪ್ರಕಾರ ಸಾಮಾಜಿಕ ಅಂತರದೊಂದಿಗೆ ಅಂಗಡಿಗಳನ್ನು ತೆರೆದು ಕಾರ್ಯನಿರ್ವಹಿಸುವಂತೆ ಸೂಚನೆ ನೀಡಲಾಗಿದೆ.