ನವದೆಹಲಿ: ಕೃಷಿ ಸಂಬಂಧಿತ ಚಟುವಟಿಕೆ ಯಂತ್ರೋಪಕರಣಗಳ ಸಾಗಾಟಕ್ಕೆ ಲಾಕ್‌‌ಡೌನ್ ಅನ್ವಯಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದು, ಕೃಷಿ ಕೆಲಸ ಮಾಡುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತಿ ಮುಖ್ಯ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ತೊಮರ್ ಅವರು ನವದೆಹಲಿಯಲ್ಲಿ ತಿಳಿಸಿದ್ದಾರೆ.

ಭಾರತ ಕೃಷಿ ಪ್ರಧಾನ ದೇಶ. ಆದ್ದರಿಂದ ಕೃಷಿಗೆ ಸಂಬಂಧಿಸಿದ ವಸ್ತುಗಳ ಮಾರಾಟ, ವಿತರಣೆಗೆ ಲಾಕ್ ಡೌನ್ ಅನ್ವಯಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.