ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಮಹತ್ವದ ಸಂಪುಟ ಸಭೆಯಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೆ ತೀರ್ಮಾನಿಸಲಾಗಿದೆ.

5ನೇ ತರಗತಿಯವರೆಗೆ ಮಾತೃಭಾಷೆ/ಪ್ರಾದೇಶಿಕ ಭಾಷೆಯಲ್ಲಿ ಶಿಕ್ಷಣ ನೀಡಲಾಗುವುದು. ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳ ನಿಯಂತ್ರಣಕ್ಕೆ ಒಂದೇ ಸಂಸ್ಥೆಯನ್ನು ಸ್ಥಾಪನೆ ಮಾಡಲಾಗುವುದು. ಎಲ್ಲಾ ಖಾಸಗಿ ಹಾಗೂ ಸರ್ಕಾರಿ ವಿಶ್ವವಿದ್ಯಾಲಯಗಳ ಕೋರ್ಸ್ ಗಳ ಪ್ರವೇಶಕ್ಕೆ ಒಂದೇ ಪ್ರವೇಶ ಪರೀಕ್ಷೆ ಇರಲಿದೆ.

28 ವರ್ಷದ ಬಳಿಕ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡಲು ಕೇಂದ್ರ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮಾನವ ಸಂಪನ್ಮೂಲ ಸಚಿವಾಲಯದ ಹೆಸರನ್ನು ಶಿಕ್ಷಣ ಸಚಿವಾಲಯ ಎಂದು ಬದಲಾವಣೆ ಮಾಡಲಾಗಿದೆ.