ಬೆಂಗಳೂರು:  ಕೆಎಸ್ಆರ್ ಟಿಸಿ ತನ್ನ ನೌಕರರಿಗೆ ಸ್ವಯಂ ನಿವೃತ್ತಿ ಯೋಜನೆಯನ್ನು (ವಿಆರ್‌ಎಸ್‌) ಪ್ರಕಟಿಸಿದೆ.

ಈ ಕುರಿತ ಅರ್ಜಿಗಳನ್ನು ಪರಿಶೀಲಿಸಿ, ಅಂಗೀಕರಿಸಲು ವಿಭಾಗೀಯ ಮಟ್ಟದಲ್ಲಿ ಸಮಿತಿಗಳನ್ನು ರಚನೆ ಮಾಡಿದೆ.

ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ, ಆಡಳಿತಾತ್ಮಕ ಕಾರಣದಿಂದ ಮತ್ತು ನೌಕರರ ಹಿತದೃಷ್ಟಿಯಿಂದ ಈ ಯೋಜನೆ ಘೋಷಿಸಲಾಗಿದೆ. ಸ್ವಯಂ ನಿವೃತ್ತಿ ತೆಗೆದುಕೊಳ್ಳುವವರಿಗೆ ಆಕರ್ಷಕ ಪರಿಹಾರವೂ ಸಿಗಲಿದೆ ಎಂದು ನಿಗಮ ಹೇಳಿದೆ.!