ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಹುದ್ದೆಗಳಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೊದಲು ಕನ್ನಡ ಭಾಷಾ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿ ಪ್ರಕಟಿಸಿದೆ.

ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಗುಂಪು-ಎ, ಬಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಅರ್ಹ ಅಭ್ಯರ್ಥಿಗಳು ಅ.5ರಂದು ನಡೆಯಲಿರುವ ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ kea.kar.nic.in ವೆಬ್‌ಸೈಟ್ ಗೆ ಭೇಟಿ ನೀಡಿ.