ಬೆಂಗಳೂರು: ಇಂದು ನಡೆದ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರಿಗೆ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಅಧಿಕಾರ ಹಸ್ತಾಂತರಿಸಿದರು.

ಜೊತೆಗೆ  ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗೂ ಸಲೀಂ ಅಹಮ್ಮದ್ ಅವರುಗಳು ಅಧಿಕಾರ ಸ್ವೀಕರಿಸಿದರು.

ಅಧಿಕಾರದ ಹಸ್ತಾಂತರ ಕಾರ್ಯಕ್ರಮವನ್ನು ವಿಡಿಯೋ ಕಾನ್ಫರೆನ್ಸ್‍ ಮೂಲಕ ರಾಜ್ಯಾದ್ಯಂತ ಸುಮಾರು 10 ಲಕ್ಷಕ್ಕೂ ಹೆಚ್ಚು ಮಂದಿ ಏಕಕಾಲಕ್ಕೆ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದರು.