ಬೆಂಗಳೂರು : ಸಮಿಶ್ರ ಸರಕಾರವನ್ನು  ಅಸ್ಥಿರಗೊಳಿಸಲು ಬಿಜೆಪಿ ಮುಂದಾಗಿದೆ. ಆಪರೇಷನ್ ಕಮಲಕ್ಕೆ ಮೂಲಕ ಕಾಂಗ್ರೆಸ್ ಶಾಸಕರಿಗೆ 50 ರಿಂದ 100 ಕೋಟಿ ರೂ. ವರೆಗೆ ಹಣದ ಆಮೀಷ ನೀಡಲಾಗುತ್ತಿದೆ . ನಾಯಕತ್ವವನ್ನು ಬಿಎಸ್.ಯಡಿಯೂರಪ್ಪ ವಹಿಸಿಕೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎಸ್ ವೈ ನಿರ್ದೇಶನದ ಮೇರೆಗೆ ಶಾಸಕರಾದ ಎಸ್.ಆರ್ ವಿಶ್ವನಾಥ್ ಹಾಗೂ ಅಶ್ವತ್ಥನಾರಾಯಣ, ಸಕಲೇಶಪುರ ಟಿಕೆಟ್ ಆಕಾಂಕ್ಷಿ ಸೋಮಶೇಖರ್, ಮಾಜಿ ಶಾಸಕ ಸಿ.ಪಿ. ಯೋಗಿಶ್ವರ್ ಕಾಂಗ್ರೆಸ್ ಶಾಸಕರಿಗೆ ಆಮಿಷಗಳನ್ನು ಒಡ್ಡುತ್ತಿದ್ದಾರೆ ಎಂದು ಹೇಳಿದರು.

ಆಮಿಷ ಒಡ್ಡಲು ಬಿಜೆಪಿ ನಾಯಕರು ಅವಲಂಬಿಸಿರುವ ಹಣದ ಮೂಲ ಯಾವುದು ಎಂಬುದರ ಬಗ್ಗೆ ತನಿಖೆಯಾಗಬೇಕು. ಹಾಗಾಗಿ ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆಯಲ್ಲಿ ದೂರು ನೀಡಲಾಗಿದೆ ಎಂದರು.