ಬೆಂಗಳೂರು : ಮೈಸೂರು ವಿಶ್ವವಿದ್ಯಾಲಯದಿಂದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಕೆ-ಸೆಟ್ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಜೂನ್ 21 ರಂದು ಪರೀಕ್ಷೆ ನಡೆಯಲಿದೆ ಎಂದು ಸಂಯೋಜನಾಧಿಕಾರಿ ಪ್ರೊ.ಎಚ್. ರಾಜಶೇಖರ್ ತಿಳಿಸಿದ್ದಾರೆ.

ಕೆ-ಸೆಟ್ ಪರೀಕ್ಷೆಯನ್ನು ಏಪ್ರಿಲ್ 12 ರಂದು ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ಕೊರೊನಾ ವೈರಸ್ ಭೀತಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಿರುವ ಕಾರಣ ಜೂನ್ ನಲ್ಲಿ ಕೆ-ಸೆಟ್ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ http:/kset.uni.mysore.ac.in ಗೆ ಭೇಟಿ ನೀಡಿ.