ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯನ್ನು (ಕೆ-ಸೆಟ್‌) ಮುಂದೂಡಲಾಗಿದೆ. ಏ.14ರಂದು ಪರೀಕ್ಷೆ ನಡೆಯಬೇಕಿತ್ತು.

ಕೊರೋನಾ ಸೋಂಕು ಹಬ್ಬುವುದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ದೇಶಾದ್ಯಂತ ಲಾಕ್‌ಡೌನ್‌ ಘೋಷಿಸಿರುವುದರಿಂದ ಪರೀಕ್ಷೆಯನ್ನು ಮುಂದೂಡಲಾಗಿದೆ.

ಪರೀಕ್ಷಾ ದಿನಾಂಕವನ್ನು ಕೆ-ಸೆಟ್ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಹೇಮಂತ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.