ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರವು ವಿಶೇಷ ಪ್ಯಾಕೇಜ್ ಹೆಸರಿನಲ್ಲಿ ಜನರಿಗೆ ಟೋಪಿ ಹಾಕುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ವೇಳೆ, ಬಡವರ ಜೀವನದ ಜೊತೆ ಚೆಲ್ಲಾಟ ಆಡಬೇಡಿ. ಪ್ಯಾಕೇಜ್ ಬದಲಿಗೆ 50 ಲಕ್ಷ ಬಡವರಿಗೆ ತಲಾ 5000 ರೂ. ಹಣ ನೀಡಿದ್ದರೆ ಅನುಕೂಲವಾಗುತ್ತಿತ್ತು ಎಂದಿದ್ದಾರೆ.

ಕೇಂದ್ರ, ರಾಜ್ಯ ಸರ್ಕಾರಗಳ ಪ್ಯಾಕೇಜ್ ಬಣ್ಣವನ್ನು ಮುಂದಿನ ದಿನಗಳಲ್ಲಿ ಬಯಲು ಮಾಡುತ್ತೇನೆ ಎಂದು ಹೇಳಿದ್ದಾರೆ.