ಬೆಂಗಳೂರು : ಕೇಂದ್ರ ಸರ್ಕಾರವು ರಾಜ್ಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 1776.65 ಕೋಟಿ ರೂ. ಸರಕು ಸೇವಾ ತೆರಿಗೆ ನಷ್ಟ ಪರಿಹಾರ ಬಿಡುಗಡೆ ಮಾಡಿದೆ.

ಈ ಕುರಿತು ಮಾಹಿತಿ ನೀಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಿಎಸ್ ಟಿ ನಷ್ಟ ಪರಿಹಾರದ ಭಾಗವಾಗಿ ಕೇಂದ್ರ ಸರ್ಕಾರ ಏಪ್ರಿಲ್-ಮೇ ಅವಧಿ ಸಂಬಂಧಪಟ್ಟಂತೆ 1776.65 ಕೋಟಿ ರೂ. ಬಿಡುಗಡೆ ಮಾಡಿದ್ದು, ರಾಜ್ಯಕ್ಕೆ ಬರಬೇಕಾದ ಬಾಕಿ 11,432 ಕೋಟಿ ರೂ. ಗಳನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಲಾಗಿದೆ ಎಂದರು.