ನವದೆಹಲಿ: ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ಇಂದು ನ್ಯಾಷನಲ್ ಟೆಸ್ಟಿಂಗ್ ಏಜನ್ಸಿಯ ನಿರ್ದೇಶಕರಿಗೆ ಪತ್ರ ಬರೆದಿದ್ದು, ಸಂಸ್ಥೆ ಅಡಿ ನಡೆಸುವ ಎಲ್ಲಾ ಪ್ರವೇಶ ಪರೀಕ್ಷೆಗಳ ಅರ್ಜಿ ಸಲ್ಲಿಸುವ ಅವಧಿಯನ್ನು ಮತ್ತೊಂದು ತಿಂಗಳು ವಿಸ್ತರಿಸಿ ಎಂದು ಸೂಚಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಐಸಿಎಆರ್, ಜವಾಹರ್ ಲಾಲ್ ವಿವಿ ಪ್ರವೇಶ ಪರೀಕ್ಷೆ, ಯುಜಿಸಿ ನೆಟ್, ಸಿಎಸ್ಐಆರ್ ನೆಟ್ ಸೇರಿದಂತೆ ಎಲ್ಲಾ ಪ್ರವೇಶ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ ಮಾಡಲಾಗುತ್ತದೆ ಎನ್ನಲಾಗಿದೆ.