ಚಿತ್ರದುರ್ಗ: ಕೇಂದ್ರ ಸರ್ಕಾರದ ಆರ್ಥಿಕ ದಿವಾಳಿತನದ ವಿರುದ್ಧ ಐಕ್ಯ ಹೋರಾಟಕ್ಕೆ ಮುಂದಾಗಲು ಮಾಯಾವತಿ ಹೇಳಿದರು.

ನಗರದ ಜೆಡಿಎಸ್ ಹಾಗೂ ಬಿಎಸ್ಪಿ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಕೇಂದ್ರ ಸರ್ಕಾರದ ನೋಟ್ ಅಮಾನ್ಯೀಕರಣ, ಜಿ ಎಸ್ಟಿ ಯಿಂದ ಬಡ ಜನರು ದಿವಾಳಿಯಾಗಿದ್ದಾರೆ ಎಂದರು.

ಭ್ರಷ್ಟಾಚಾರದ ವಿರುದ್ಧ ಮಾತಾಡದ ಪ್ರಧಾನಿಗಳು ಇಂದು ಮೌನವಹಿಸಿದ್ದಾರೆ. ವಿಜಯ್ ಮಲ್ಯ, ನೀರವ್ ಮೋದಿ, ಲಲಿತ್ ಮೋದಿ ಸೇರಿದಂತೆ ಅನೇಕ ತೆರಿಗೆ ಕಳ್ಳರನ್ನ ರಕ್ಷಣೆ ಮಾಡಲಾಗಿದೆ ಎಂದು ಹೇಳಿದರು.
ಕೇಂದ್ರ ಸರಕಾರದ ವಿರುದ್ಧ ಹೋರಾಟಕ್ಕೆ ಐಕ್ಯರಂಗ ಮುಖ್ಯ ಎಂದರು.

ಮಂಡಲ್ ಆಯೋಗವನ್ನ ಜಾರಿ ಮಾಡಲು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳಿಗೆ ಇಚ್ಛಾಶಕ್ತಿ ಇಲ್ಲ ಎಂದರು. ಬಿಎಸ್ಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ಬಡವರ ಪರ ಕೆಲಸ ಮಾಡಲಿದ್ದೇವೆ ಎಂದು ಹೇಳಿದರು.