ನವದೆಹಲಿ: ದೀಪಾವಳಿ ಹಬ್ಬಕ್ಕೂ ಮುನ್ನ ಕೇಂದ್ರ ಸರ್ಕಾರವು ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಿದ್ದು, 5% ಡಿಎ ಹೆಚ್ಚಳ ಮಾಡಿದೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಎ ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ. ಈ ಉಡುಗೊರೆಯಿಂದ ದೇಶಾದ್ಯಂತದ 50 ಲಕ್ಷ ಸರ್ಕಾರಿ ನೌಕರರು ಹಾಗೂ 62 ಲಕ್ಷ ಪಿಂಚಣಿದಾರರಿಗೆ ಲಾಭವಾಗಲಿದೆ.

ಸದ್ಯಕ್ಕಿರುವ ಡಿಎ 12%ರಿಂದ 17% ಆಗಲಿದ್ದು, ಇದರಿಂದ ಸರ್ಕಾರದ ಬೊಕ್ಕಸಕ್ಕೆ ₹16000 ಕೋಟಿ ಹೊರೆಯಾಗಲಿದೆ ಎಂದು ಕೇಂದ್ರ ಸಚಿವ ಜಾವಡೇಕರ್ ತಿಳಿಸಿದ್ದಾರೆ.