ಬೆಂಗಳೂರು: ಏ.18 ಮತ್ತು 23ರಂದು ರಾಜ್ಯದಲ್ಲಿ ಲೋಕಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆ ಕಾಂಗ್ರೆಸ್ ಪಕ್ಷವು ಇಂದು ತನ್ನ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.

ಪಟ್ಟಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಗುಲಾಂನಬಿ ಆಜಾದ್, ಸಲೀಂ ಅಹ್ಮದ್, ಕೆ.ಸಿ.ವೇಣುಗೋಪಾಲ್, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ದಿನೇಶ್ ಗುಂಡೂರಾವ್ ಹಾಗೂ ಡಾ.ಜಿ.ಪರಮೇಶ್ವರ್ ಸೇರಿದಂತೆ ಒಟ್ಟು 40 ಮಂದಿ ನಾಯಕರ ಹೆಸರಿದೆಯಂತೆ. ಹಾಗೇ ಇನ್ನೂ ಕೆಲವ ಸ್ಟಾರ್ ಪ್ರಚಾರಕರು ಸೇರಲಿದ್ದಾರೆ.