ಬೆಂಗಳೂರು:ಕೊಡಗು ಜಿಲ್ಲೆಗೆ ಈಗಾಗಲೇ ನೂರು ಕೋಟಿ ರೂ. ಅನುದಾನ ಘೋಷಿಸಲಾಗಿದೆ ಅಂತ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ತಿಳಿಸಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ವಿವಿಧ ಸಂಘ-ಸಂಸ್ಥೆಗಳ ಮೂಲಕ ಪರಿಹಾರದ ಚೆಕ್ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಕೊಡಗು ಜಿಲ್ಲೆಗೆ ಪ್ರತ್ಯೇಕವಾಗಿ 100 ಕೋಟಿ ರೂ. ಅನುದಾನ ನೀಡಲಾಗುತ್ತಿದೆ ಎಂದರು.

ಅದರಲ್ಲಿ ನಿನ್ನೆ 30 ಕೋಟಿ ರೂ.ನಷ್ಟು ಬಿಡುಗಡೆ ಮಾಡಲಾಗಿದೆ. ಪ್ರತಿ ಕುಟುಂಬಕ್ಕೂ 3,800ರೂ. ನೀಡಲಾಗುತ್ತಿದ್ದು, ತಾತ್ಕಾಲಿಕವಾಗಿ ಜೀವನಾವಶ್ಯಕ ವಸ್ತುಗಳನ್ನು ಖರೀದಿಸಲು ಮತ್ತು ನಿತ್ಯ ಅಗತ್ಯಗಳನ್ನು ನಿಭಾಯಿಸಿಕೊಳ್ಳಲು ನೀಡಲಾಗಿದೆ ಎಂದು ಹೇಳಿದರು.