ಬೆಂಗಳೂರು: ಕೊರೋನಾ ತಡೆಗೆ ಗ್ರಾ.ಪಂ ಮತ್ತು ವಾರ್ಡ್ ಮಟ್ಟದಲ್ಲಿ ಸ್ವಯಂಸೇವಕರು, ಸಂಘಸಂಸ್ಥೆಗಳು, ಅಧಿಕಾರಿಗಳ ಸಮಿತಿ ರಚನೆಯಾಗಬೇಕು.

ಇದೇ ರೀತಿ ಹಾಪ್ ಕಾಮ್ಸ್, ಕೆಎಂಎಫ್ ಸೇರಿದಂತೆ ಸ್ವಯಂ ಸೇವಕರ ಗುಂಪುಗಳನ್ನು ಬಳಸಿಕೊಂಡು ರೈತರಿಂದ ಉತ್ಪನ್ನಗಳನ್ನು ಸರ್ಕಾರವೇ ಮುಂದೆ ನಿಂತು ಖರೀದಿಸಿ, ನಂತರ ಮಾರಾಟ ಮಾಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಸರ್ಕಾರ ಕೃಷಿ ಉತ್ಪನ್ನ ಖರೀದಿಗೆ ವ್ಯವಸ್ಥೆ ಮಾಡುವ ಅನಿವಾರ್ಯತೆ ಬಗ್ಗೆ ವಿವರವಾಗಿ ತಿಳಿಸಿದ್ದಾರೆ.