ಬೆಂಗಳೂರು : ಕೊರೊನಾ ರೋಗಿಗಳ ಫೋಟೋವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದು ಮಾಧ್ಯಮಗಳಿಗೆ ಕಳುಹಿಸಿ ಖಾಸಗಿತನಕ್ಕೆ ಧಕ್ಕೆ ತರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಭಾಸ್ಕರ್ ರಾವ್, ಆಸ್ಪತ್ರೆಗಳಲ್ಲಿ ಕ್ವಾರಂಟೈನ್ ನಲ್ಲಿರುವ ರೋಗಿಗಳ ಭಾವಚಿತ್ರ ಅಥವಾ ವಿಡಿಯೋ ಸೆರೆಹಿಡಿದು ಮಾಧ್ಯಮಗಳಿಗೆ ಕಳುಹಿಸಲಾಗುತ್ತಿದೆ. ಇದರಿಂದ ವ್ಯಕ್ತಿಯ ಗೌಪ್ಯತನಕ್ಕೆ ಧಕ್ಕೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಇಂತಹ ಪ್ರವೃತ್ತಿ ಮುಂದುವರೆದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಭಾಸ್ಕರ್ ರಾವ್ ಸೂಚನೆ ನೀಡಿದ್ದಾರೆ.