ಕಲಬುರಗಿ: ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ 7 ದಿನ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.
ಜುಲೈ 27 ರ ವರೆಗೆ ಲಾಕ್ ಡೌನ್ ವಿಸ್ತರಿಸಿ ಜಿಲ್ಲಾಧಿಕಾರಿ ಬಿ.ಶರತ್ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಜುಲೈ 13 ರಂದು ಕಲಬುರಗಿ ನಗರ ಮತ್ತು ಇತರ ತಾಲೂಕುಗಳಲ್ಲಿ ಜುಲೈ 14 ರಿಂದ 20 ರ ತನಕ ಲಾಕ್ ಡೌನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದರು. ಈಗ ಅದನ್ನು ಜುಲೈ 27 ರ ಮಧ್ಯರಾತ್ರಿ ತನಕ ವಿಸ್ತರಣೆ ಮಾಡಲಾಗಿದೆ.
No comments!
There are no comments yet, but you can be first to comment this article.