ದಾವಣಗೆರೆ: ಜಿಲ್ಲೆಯಲ್ಲಿ ಎಷ್ಟೇ ಕೇಸ್ ಬಂದರೂ ನಿಭಾಯಿಸುವ ವ್ಯವಸ್ಥೆ ಇದೆ. ಮನೆಮನೆಗೆ ಹೋಗಿ ಸೋಂಕಿತರನ್ನು ಬೇಗ ಪತ್ತೆ ಹಚ್ಚಿ, ಶೀಘ್ರದಲ್ಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಕೆಲಸ ಆಗಬೇಕಿದೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಆಗುತ್ತಿರುವ ಸಾವಿನ ಪ್ರಮಾಣ ನಮ್ಮ ಕಾರ್ಯದಕ್ಷತೆಯನ್ನು ಪ್ರಶ್ನಿಸುವಂತಿದೆ. ಮುಂದಿನ ದಿನಗಳಲ್ಲಿ ಅನುಸರಿಸಬೇಕಾದ ಮಾರ್ಗೋಪಾಯಗಳೇನು ಎಂಬ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ ಎಂದರು.