ನವದೆಹಲಿ: ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಾತನಾಡಿದ್ದು, ದೇಶದ ಎಲ್ಲಾ ಸಮುದಾಯಗಳ ಧರ್ಮಗುರುಗಳೂ ಕೂಡ ತಮ್ಮ ಸಮುದಾಯಗಳ ಜನರಿಗೆ ಕೊರೋನಾ ಸೋಂಕಿನ ಬಗ್ಗೆ ಮನವರಿಕೆ ಮಾಡಿಕೊಡುವ ಮೂಲಕ ಸಹಕರಿಸಬೇಕು ಎಂದು ಹೇಳಿದ್ದಾರೆ.

ಕೊರೋನಾ ವಿರುದ್ಧ ನಾವೆಲ್ಲರೂ ಒಟ್ಟಾಗಿ ಹೋರಾಡಬೇಕಿದೆ. ಈ ವಿಚಾರದಲ್ಲಿ ಯಾರೊಬ್ಬರೂ ನಿರ್ಲಕ್ಷ್ಯ ವಹಿಸುವುದು ಬೇಡ. ದೇಶದ ಜನರೂ ಕೂಡ ಲಾಕ್ ಡೌನ್ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.