ಬೆಂಗಳೂರು : ಕೊರೊನಾ ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿದ್ದ ಕ್ಷೌರಿಕ ಮತ್ತು ಅಗಸರಿಗೆ ಸರ್ಕಾರ ಘೋಷಿಸಿದ್ದ 5 ಸಾವಿರ ರೂ. ಪ್ರೋತ್ಸಾಹ ಧನ ಪಡೆಯಲು ಅರ್ಜಿ ಸಲ್ಲಿಸುವ ಅವಧಿಯನ್ನು ಜು. 10 ರವರೆಗೆ ವಿಸ್ತರಿಸಲಾಗಿದೆ.

ಅರ್ಹರು ರಾಜ್ಯ ಸರ್ಕಾರದ 5 ಸಾವಿರ ರೂ. ಪ್ರೋತ್ಸಾಹಧನ ಪಡೆಯಲು ಸೇವಾ ಸಿಂಧು ವೆಬ್ ಪೋರ್ಟಲ್ ನಲ್ಲಿ ಜೂ. 30 ರೊಳಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿತ್ತು. ಈವರೆಗೆ ರಾಜ್ಯದ ವಿವಿಧ ಭಾಗಗಳ ನೂರಾರು ಮಂದಿ ಪ್ರೋತ್ಸಾಹಧನಕ್ಕೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಇನ್ನೂ ಹೆಚ್ಚು ಜನರು ಅರ್ಜಿ ಸಲ್ಲಿಸಲು ಅನುಕೂಲಕ್ಕಾಗಿ ರಾಜ್ಯ ಸರ್ಕಾರವು ಜುಲೈ 10 ರವರೆಗೆ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದೆ. ಈ ಮೂಲಕ 5 ಸಾವಿರ ರೂ. ಪರಿಹಾರ ಪಡೆಯಲು ಕ್ಷೌರಿಕರು ಮತ್ತು ಅಗಸರು ಜುಲೈ 10 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.