ಬೆಂಗಳೂರು: ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳ ಶಿಕ್ಷಕರು ಹಲವು ರೀತಿಯ ಸಮಸ್ಯೆ ಎದುರಿಸುತ್ತಿದ್ದು, ಅವರಿಗೆ ಸಹಾಯ ಮಾಡಲು ಇಲಾಖೆ ಚಿಂತನೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು. ಅನುದಾನ ರಹಿತ ಶಾಲೆಗಳ ಹಲವು ಶಿಕ್ಷಕರು ತರಕಾರಿ ಮಾರಾಟ, ನರೇಗಾದಂತಹ ಕೆಲಸಗಳಿಗೆ ಹೋಗುವಂತಹ ಸ್ಥಿತಿ ಕಂಡು ನಿಜಕ್ಕೂ ಬೇಸರವಾಗಿದೆ. ಅವರ ಸಹಾಯ ಹಸ್ತ ನೀಡಲು ಸರಕಾರ ಮುಂದಾಗಲು ಚಿಂತಿಸಲಿದೆ ಎಂದು ಹೇಳಿದ್ದಾರೆ.