ಚಿತ್ರದುರ್ಗ:  ಖಾಸಗಿ ಬಸ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಪರಿಣಾಮವಾಗಿ ಬಸ್ ಹೊತ್ತಿ ಉರಿದು ಐವರು ಸಜೀವ ದಹನವಾದ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸ್ತೂರಿ ರಂಗಪ್ಪನಹಳ್ಳಿ ಗೇಟ್ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಖಾಸಗಿ ಬಸ್ ವಿಜಯಪುರದಿಂದ ಬೆಂಗಳೂರಿಗೆ ಹೋಗುತ್ತಿತ್ತು. ಬಸ್ ನಲ್ಲಿ‌ ಸುಮಾರು 35 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಅವರಲ್ಲಿ ಮಗು ಸೇರಿದಂತೆ ಐವರು ಸಜೀವ ದಹನವಾಗಿದ್ದಾರೆಂದು ಪ್ರತ್ಯಕ್ಷದರ್ಶಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಬೆಂಕಿಯ ತೀವ್ರತೆಗೆ ಬಸ್ ಸಂಪೂರ್ಣವಾಗಿ ಸುಟ್ಟ ಕರಕಲಾಗಿದ್ದು, ಸುಮಾರು 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಹಿರಿಯೂರು ಮತ್ತು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ದುರಂತ ಸಂಭವಿಸಿದೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ