ತುಮಕೂರು: ಖಾಸಗಿ ಬಸ್ ಗೆ ಬೆಂಕಿ ತಗುಲಿ 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಊರುಕೆರೆ ಬಳಿ ನಡೆದಿದೆ.

ಬಸ್ ಬೆಳಗಿನ ಜಾವ 3.30 ರ ಸುಮಾರಿಗೆ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಹಿಳೆಯೊಬ್ಬರು ಕೂಗಾಡಿದ್ದರಿಂದ ಪ್ರಯಾಣಿಕರು ಬಸ್ ಚಾಲಕ ಎಚ್ಚೆತ್ತುಕೊಂಡಿದ್ದಾರೆ. ಕೂಡಲೇ ಬಸ್ ಚಾಲಕ ಮತ್ತು ನಿರ್ವಾಹಕ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಆದರೆ ಈ ವೇಳೆಗೆ 8 ಮಂದಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ವನ್ನು ದಾಖಲಿಸಿಕೊಳ್ಳಲಾಗಿದೆ.!