ಚಿತ್ರದುರ್ಗ:ಮುಖ್ಯ ಮಂತ್ರಿ ಕುಮಾರಸ್ವಾಮಿಯವರು ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್ ಪಾಸ್ ಅಂತ ಹೇಳಿದ್ದಾರೆ ಆದ್ರೆ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರು  ಖಾಸಗಿ ಶಾಲೆಯ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡುವ ಕುರಿತು ಸಮಾಲೋಚನೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಹೇಳಿದರು.

ಮಂಗಳವಾರ ಛಲವಾದಿ ಕಾರ್ಯಕ್ರಮವಾದ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಅಭಿನಂದನ ಸಮಾರಂಭದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು ಇದೇ ವೇಳೆ ಅವರು ಮಾತನಾಡಿ ಸರ್ಕಾರಿ ಶಾಲೆಗಳಿಗೆ ಮಾತ್ರ ಉಚಿತ ಬಸ್ ಪಾಸ್ ವ್ಯವಸ್ಥೆ ಮಾಡಲಾಗಿದೆ. ಇದೊಂದು ಆರಂಭ ಮಾತ್ರ. ಇದರ ಸಾಧಕ-ಬಾದಕ ಪರಿಶೀಲಿಸಿ, ಆರ್ಥಿಕ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದು ಹೇಳಿದ್ದಾರೆ.