ಬೆಂಗಳೂರು: ಕೊರೋನಾ ವೈರಸ್ ಭೀತಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇರುವ 9 ತಿಂಗಳ ಗರ್ಭಿಣಿಯರಿಗೆ ಸೋಂಕು ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದೆ.

9 ತಿಂಗಳ ಗರ್ಭಿಣಿಯರು ಅಥವಾ ಹೆರಿಗೆ ದಿನಾಂಕ ಹತ್ತಿರವಿರುವವರಿಗೆ ಸೋಂಕು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.

ಈಗಾಗಲೇ ಎಲ್ಲಾ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಆಶಾ ಕಾರ್ಯಕರ್ತರು ಮನೆ ಮನೆಗೂ ಹೋಗಿ ಗರ್ಭಿಣಿಯರಿಗೆ ಸೋಂಕು ಪರೀಕ್ಷೆ ಕುರಿತಂತೆ ಮಾಹಿತಿ ನೀಡುತ್ತಿದ್ದಾರೆ.!