ಬೆಂಗಳೂರು: ಬಿಜೆಪಿ ಆಡಳಿತಾರೂಢ ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸಲು ರಾಜಕೀಯ ಪಿತೂರಿ ನಡೆಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.

ಬೆಂಗಳೂರು ಗಲಭೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಘಟನೆಗೆ ಕಾರಣಕರ್ತರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಯಾವುದೇ ವೇದಿಕೆಯಲ್ಲಿಯೇ ಆದರೂ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವುದನ್ನು ನಾನು ಒಪ್ಪುವುದಿಲ್ಲ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.