ಬೆಂಗಳೂರು:  ಗಾಲಿ ಜನಾರ್ದನ ರೆಡ್ಡಿ ಅವರು ಈಗ ಬಿಜೆಪಿಯಲ್ಲಿಲ್ಲ ಹಾಗಾಗಿ, ಆವರ ಬಗ್ಗೆ ಹೆಚ್ಚು ಮಾತನಾಡದಿರುವುದೇ ಲೇಸ್ ಅಂತ ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಈಗ ಹಣ ದ್ವಿಗುಣ ಮಾಡುವ ಅವ್ಯವಹಾರದಲ್ಲಿ ಸಿಲುಕಿಕೊಂಡಿರುವ ರೆಡ್ಡಿಯವರ ಬಗ್ಗೆ ಮಾತನಾಡುವುದಿಲ್ಲ. ತಪ್ಪು ಯಾರು ಮಾಡಿದ್ರೂ ಕಾನೂನು ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ. ಮಾಧ್ಯಮಗಳಲ್ಲಿ ಬಂದಿರುವ ವರದಿ ನೋಡಿದ್ದು ಬಿಟ್ಟರೆ, ನನಗೆ ಈ ಪ್ರಕರಣದ ಬಗ್ಗೆ ಹೆಚ್ಚು ತಿಳಿದಿಲ್ಲ ಎಂದು ಹೇಳಿದ್ದಾರೆ.