ಬೆಂಗಳೂರು:  ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಚೆಕ್ ಬೌನ್ಸ್ ಪ್ರಕರಣದಲ್ಲಿ ಪೊಲೀಸರ ವಶದಲ್ಲಿದ್ದರು ಆನಂತರ ಅವರನ್ನು ಬಿಡುಗಡೆಗೊಳಿಸಲಾಗಿದ್ದು ಹೀಗೆ.!

1.25 ಕೋಟಿ ರೂ. ಚೆಕ್ ಬೌನ್ಸ್ ಪ್ರಕರಣದಲ್ಲಿ ವಾರಂಟ್ ರಿಕಾಲ್ ಮಾಡಿಸಿಕೊಳ್ಳಲು ಕೋರ್ಟ್ ಗೆ ಹಾಜರಾಗಿದ್ದ ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಪೊಲೀಸರ ವಶಕ್ಕೆ ಒಪ್ಪಿಸಿತ್ತು.

ಆನಂತರ 100 ರೂ. ವಾರೆಂಟ್ ರಿಕಾಲ್ ದಂಡ ಪಾವತಿಸಿಕೊಂಡು ಗೂಳಿಹಟ್ಟಿ ಶೇಖರ್ ಅವರನ್ನು ಬಿಡುಗಡೆಗೊಳಿಸಿ ಜನಪ್ರತಿಧಿಗಳ ನ್ಯಾಯಾಲಯ ಸೂಚಿಸಿದೆ.

ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ವಿರುದ್ಧ 309 ಪ್ರಕರಣ ದಾಖಲಾಗಿತ್ತು.ಜನಪ್ರತಿನಿಧಿಗಳ ಕೋರ್ಟ್ ಸೂಚನೆ ಮೇರೆಗೆ ಗೂಳಿಹಟ್ಟಿ ಶೇಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.!