ಬೆಂಗಳೂರು: ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೂ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಬೊಮ್ಮಾಯಿ, ‘ನಮ್ಮ ಮನೆಯ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು, ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿದ್ದೇನೆ’ ಎಂದು ಟ್ವೀಟ್ ಮಾಡಿದ್ದಾರೆ.!